ಕುಷ್ಠರೋಗ ಪತ್ತೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ

  |   Chikkaballapuranews

ಚಿಕ್ಕಬಳ್ಳಾಪುರ: ಸರ್ಕಾರ ಕುಷ್ಠರೋಗದಿಂದ ಬಳಲು ತ್ತಿರುವವರಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಂಕೋಚ ಪಡದೇ ರೋಗ ಪತ್ತೆ ಅಭಿಯಾನಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡುವ ಮೂಲಕ ರೋಗಿಗಳು ಗುಣಮುಖರಾಗಲು ಸಹ ಕರಿಸಬೇಕೆಂದು ಜಿಪಂ ಬಿ.ಫೌಜಿಯಾ ತರನ್ನುಮ್‌ ತಿಳಿಸಿದರು.

ತಾಲೂಕಿನ ನಾಯನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ‌ ಆಯೋಜಿಸಿದ್ದ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿರ್ಲಕ್ಷ್ಯ ಸಲ್ಲದು: ಕುಷ್ಠರೋಗವು ಸಾಂಕಾಮಿಕ ರೋಗವಾಗಿದ್ದು, ಪ್ರಾರಂಭದಲ್ಲಿಯೇ ಗುರುತಿಸಿದರೆ ಬಹುವಿಧದ ಔಷಧದ ಮೂಲಕ ಗುಣಪಡಿಸ ಬಹುದು. ಅದು ಯಾವುದೇ ರೀತಿಯಲ್ಲಿಯೂ ಮಾರಣಾಂತಿಕ ಕಾಯಿಲೆ ಅಲ್ಲ. ಆದರೆ ಯಾವುದೇ ಕಾಯಿಲೆ ಇದ್ದರೂ ನಿರ್ಲಕ್ಷಿಸಬಾರದು.

ಪ್ರಕರಣ ಪತ್ತೆ: ಕುಷ್ಠರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ (ಎಲ್ಸಿಡಿಸಿ) ವಿಶೇಷ ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 23ರವರೆಗೆ ಹಮ್ಮಿಕೊಳ್ಳಲಾಗಿದೆ. ಕುಷ್ಠ ರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಕರ ತಂಡವೂ ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡು ಶಂಕಿತ ಪ್ರಕರಣಗಳನ್ನು ಪತ್ತೆ ಹಚ್ಚಲಿದ್ದಾರೆ ಎಂದರು....

ಫೋಟೋ - http://v.duta.us/7iL4zwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Q3_2SgAA

📲 Get Chikkaballapura News on Whatsapp 💬