ನೆರೆ ಕಾಮಗಾರಿ ವಿಳಂಬಕ್ಕೆ ಕಾಂಗ್ರೆಸ್‌ ಆಕ್ರೋಶ

  |   Shimoganews

ಸಾಗರ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಆದರೆ ಜಿಲ್ಲಾ ಮತ್ತು ತಾಲೂಕು ಆಡಳಿತ ನೆರೆಯಿಂದ ಆದ ಹಾನಿಯನ್ನು ಸರಿಪಡಿಸುವ ಒಂದು ಕಾಮಗಾರಿಯನ್ನೂ ಈತನಕ ಕೈಗೆತ್ತಿಕೊಂಡಿಲ್ಲ ಎಂದು ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ದೂರಿದ್ದಾರೆ.

ಇಲ್ಲಿನ ತಾಪಂ ಸದಸ್ಯರ ನೇತೃತ್ವದಲ್ಲಿ ನೆರೆ ಕಾಮಗಾರಿ ಕೈಗೊಳ್ಳದ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಕ್ರಮವನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ತಾಲೂಕಿನ ಕರೂರು ಭಾರಂಗಿ, ಆವಿನಹಳ್ಳಿ, ಕಸಬಾ, ಆನಂದಪುರ ಹೋಬಳಿಯಲ್ಲಿ ನೆರೆಯಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿದೆ. ಮುಖ್ಯಮಂತ್ರಿಗಳು ಸಾಗರಕ್ಕೆ ಭೇಟಿ ನೀಡಿದಾಗ ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದ್ದರೂ ಈತನಕ ಹಣ ಬಿಡುಗಡೆ ಮಾಡಿಲ್ಲ. ಹಣ ಇದೆ ಎಂದು ಹೇಳಲಾಗುತ್ತಿದ್ದರೂ ಯಾವುದೇ ಒಂದು ಸಣ್ಣ ಪರಿಹಾರ ಕಾಮಗಾರಿಯನ್ನು ಕೈಗೊಂಡಿಲ್ಲ. ನೆರೆಯಿಂದ ಆದ ಹಾನಿಯನ್ನು ಸರಿಪಡಿಸುವಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ವಿಪರೀತ ಮಳೆಯಿಂದಾಗಿ ತಾಲೂಕಿನಲ್ಲಿ ಅಡಕೆಗೆ ವ್ಯಾಪಕ ಕೊಳೆರೋಗ ಬಂದಿದೆ. ಕಳೆದ ವರ್ಷ ತಾಪಂ ಶ್ರಮದಿಂದಾಗಿ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 9 ಕೋಟಿ ರೂ. ಬಿಡುಗಡೆ ಮಾಡಿದ್ದರು. ಆದರೆ ಬಿಡುಗಡೆ ಮಾಡಿರುವ ಹಣ ರೈತರಿಗೆ ಸರಿಯಾಗಿ ತಲುಪಿಲ್ಲ. ಈ ಬಾರಿ ಸಹ ಇದೇ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 10 ಕೋಟಿ ರೂ. ಬಿಡುಗಡೆ ಮಾಡಬೇಕು. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ತಕ್ಷಣ ನೆರೆಯಿಂದ ಆದ ಹಾನಿಯನ್ನು ಸರಿಪಡಿಸುವ ಕಾಮಗಾರಿ ಕೈಗೆತ್ತಿಕೊಳ್ಳದೆ ಹೋದಲ್ಲಿ ಪಕ್ಷದಿಂದ ಅಹೋರಾತ್ರಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು....

ಫೋಟೋ - http://v.duta.us/oh5mNAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/XTV5aAAA

📲 Get Shimoga News on Whatsapp 💬