2025ಕ್ಕೆ ನಗರಗಳ ಶೇ.90 ಕನ್ನಡ ಶಾಲೆಗೆ ಬೀಗ

  |   Dharwadnews

ಹುಬ್ಬಳ್ಳಿ: ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಶಿಕ್ಷಕರು ತಡೆಯದಿದ್ದರೆ 2025-26ರ ವೇಳೆಗೆ ನಗರ ವ್ಯಾಪ್ತಿಯ ಶೇ.90 ಸರಕಾರಿ ಕನ್ನಡ ಶಾಲೆಗಳು ಮುಚ್ಚಲಿದ್ದು, ಸಹಸ್ರಾರು ಸರಕಾರಿ ಶಿಕ್ಷಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾರತರತ್ನ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನು 5 ವರ್ಷಗಳ ನಂತರ ಗ್ರಾಮೀಣ ಭಾಗದಲ್ಲಿ ಕೂಡ ಸರಕಾರಿ ಕನ್ನಡ ಶಾಲೆಗಳ ಸಂಖ್ಯೆ ವಿರಳವಾಗಲಿದೆ. ಮಕ್ಕಳು ಶಾಲೆಗೆ ಬರುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿ. ಗುಣಮಟ್ಟದ ಶಿಕ್ಷಣ ನೀಡಿದರೆ ಸಹಜವಾಗಿಯೇ ಮಕ್ಕಳು ಸರಕಾರಿ ಶಾಲೆಗೆ ಬಂದೇ ಬರುತ್ತಾರೆ. ಕಾನ್ವೆಂಟ್ ಶಾಲೆಯ ವ್ಯಾಮೋಹದ ಕಾರಣ ಹೇಳುವುದು ಬೇಡ. ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಗುಣಮಟ್ಟದ ಶಿಕ್ಷಣದ ಕೊರತೆಯಿದೆ. ಶಿಕ್ಷಕರು ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಕೆಲಸ ಉಳಿಸಿಕೊಳ್ಳುವುದು ದುಸ್ತರವಾಗಲಿದೆ ಎಂದರು....

ಫೋಟೋ - http://v.duta.us/AdD-rQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/8SK1MwAA

📲 Get Dharwad News on Whatsapp 💬