ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಲ್ಲ

  |   Bangalore-Ruralnews

ಹೊಸಕೋಟೆ: ತಾಲೂಕಿನಲ್ಲಿ ಇನ್ಮುಂದೆ ಅಕ್ರಮಗಳಿಗೆ ಅವಕಾಶವಿಲ್ಲ. ಸಾರ್ವಜನಿಕರು ಅಕ್ರಮ ನಡೆಯುತ್ತಿರುವ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಂಡು ಸಹಕರಿಸಬೇಕು. ಮೀರಿಯೂ ಅಕ್ರಮ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್‌ ಖಡಕ್‌ ಎಚ್ಚರಿಕೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಕಾನೂನು ಬಾಹಿರವಾಗಿ ನಡೆಯುವ ಎಲ್ಲಾ ರೀತಿಯ ಅನೈತಿಕ ಚಟುವಟಿಕೆ ತಡೆಗಟ್ಟಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕ್ಯಾಟ್‌ಪಿಶ್‌ ಸಾಕಾಣಿಕೆ ಕೇಂದ್ರಗಳನ್ನು ಧ್ವಂಸಗೊಳಿಸಲಾಗಿದೆ. ಮುಂದುವರಿಸಿದರೆ ಕೃತ್ಯದಲ್ಲಿ ತೊಡಗಿದವರು ಹಾಗೂ ಕುಟುಂಬದ ಸದಸ್ಯರೆಲ್ಲರ ವಿರುದ್ಧ ಪ್ರಕರಣದಾಖಲಿಸಲಾಗುವುದು. ಅಕ್ರಮವಾಗಿ ಗಾಂಜಾ ಇನ್ನಿತರ ಮಾದಕ ವಸ್ತುಗಳ ಮಾರಾಟ, ಕಳ್ಳತನದಂತಹ ಕೃತ್ಯಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಪೊಲೀಸ್‌ ಅಧಿಕಾರಿಗಳಿಗೆ ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ತಾಲೂಕಿನ ಬೈಲನರಸಾಪುರ, ಕಟ್ಟಿಗೇನಹಳ್ಳಿ ಗ್ರಾಮಗಳಲ್ಲಿ ನಡೆಯುವ ಹೆಚ್ಚಿನ ಅಕ್ರಮಗಳಿಂದಾಗಿ ತಾಲೂಕಿಗೆ ಕೆಟ್ಟ ಹೆಸರು ಬಂದಿದೆ. ಹೊರ ರಾಜ್ಯಗಳಲ್ಲಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇವೆರಡೂ ಗ್ರಾಮಗಳಲ್ಲಿ ಸುಮಾರು 200 ಆರೋಪಿಗಳಿದ್ದಾರೆ. ಎಸ್‌ಸಿ, ಎಸ್‌ಟಿ ದೌರ್ಜನ್ಯಗಳ ಬಗ್ಗೆ ಸುಳ್ಳು ದೂರು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು....

ಫೋಟೋ - http://v.duta.us/Ec-viAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Xb8lxQAA

📲 Get Bangalore Rural News on Whatsapp 💬