ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್‌ ಫೋನ್‌

  |   Kolar-Karnatakanews

ಕೋಲಾರ: ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ, ವಿವರಗಳನ್ನು ಸುಲಲಿತವಾಗಿ ದಾಖಲಿಸಲು ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಮೊಬೈಲ್ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಬಾಲಭವನ ಸೊಸೈಟಿ ಹಮ್ಮಿಕೊಂಡಿದ್ದ ಅಭಿರಂಗ ಮಕ್ಕಳ ನಾಟಕೋತ್ಸವ ಹಾಗೂ ಜಿಲ್ಲಾ ಮಟ್ಟದ ಪೋಷಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅರಿವು ಕಾರ್ಯಕ್ರಮ: ಪೋಷಣೆ ಅಭಿಯಾನ ದೇಶದಲ್ಲಿ 2018-19ನೇ ಮಾ.8ರಂದು ಪ್ರಾರಂಭವಾಯಿತು. ಮೊದಲ ಹಂತದಲ್ಲಿ 315, 2ನೇ ಹಂತದಲ್ಲಿ 235, 3ನೇ ಹಂತದಲ್ಲಿ ಉಳಿದ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಅಭಿಯಾನವು ಒಂದೇ ಇಲಾಖೆಗೆ ಸೀಮಿತವಾಗಿಲ್ಲ. ಮಹಿಳೆ ಮತ್ತು ಮಕ್ಕಳ ಪೋಷಣಾ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿರುವವರಿಗೆ ಅರಿವನ್ನು ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ರಕ್ತಹೀನತೆ ತಡೆ: ಜಿಲ್ಲೆಯಲ್ಲಿ 2068 ಅಂಗನವಾಡಿ ಕೇಂದ್ರಗಳಿದ್ದು, 6 ತಿಂಗಳಿಂದ 6 ವರ್ಷದವರೆಗಿನ 95 ಸಾವಿರ ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದಾರೆ. ಮಕ್ಕಳಲ್ಲಿನ ಕುಂಠಿತ ಬೆಳವಣಿಗೆ, ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟುವುದು, ಪೋಷಣ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು....

ಫೋಟೋ - http://v.duta.us/LMhqiQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/tJV_EgAA

📲 Get Kolar Karnataka News on Whatsapp 💬