ಅದ್ಧೂರಿ ವಿಮೋಚನಾ ದಿನ ಆಚರಣೆ

  |   Kalburaginews

ಕಲಬುರಗಿ: ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಸೆ. 17ದಂದು ವಿಜೃಂಭಣೆಯಿಂದ ಆಚರಿಸಲು ಹಾಗೂ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಜಿಲ್ಲಾಧಿಕಾರಿ ಬಿ. ಶರತ್‌ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೈದ್ರಾಬಾದ ಕರ್ನಾಟಕ ಪ್ರದೇಶ ವಿಮೋಚನಾ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆ ನಿರ್ಧಾರ ಕೈಗೊಂಡಿತು.

ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಲು ವಿವಿಧ ಭಾಷಣ, ಚರ್ಚೆ ಹಾಗೂ ನಿಬಂಧ ಸ್ಪರ್ಧೆ ಏರ್ಪಡಿಸಬೇಕು. ದಿನಾಚರಣೆ ಅಂಗವಾಗಿ ಅಂದು ಬೆಳಗ್ಗೆ 8:30ಕ್ಕೆ ಸರ್ದಾರ್‌ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ, ತದನಂತರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ(ಡಿ.ಎ.ಆರ್‌.) ಮೈದಾನದಲ್ಲಿ ಬೆಳಗ್ಗೆ 9ಕ್ಕೆ ಹೈದ್ರಾಬಾದ ಕರ್ನಾಟಕ ವಿಮೋಚನೆ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಹೈಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಯೋಧರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ವಿಮೋಚನಾ ದಿನದಂದು ಜಿಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆಯುವ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು....

ಫೋಟೋ - http://v.duta.us/pze6OAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/oSaJMQAA

📲 Get Kalburagi News on Whatsapp 💬