ಇಂಗ್ಲೀಷ್ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಹಿಂಪಡೆಯಿರಿ: ಸಾಹಿತಿಗಳ ಮನವಿ

  |   Karnatakanews

ಬೆಂಗಳೂರು : ಕನ್ನಡಕ್ಕೆ ಸಂಬಂಧಿಸಿದ ಬೇಡಿಕೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ನಡೆಸುತ್ತಿರುವ ಕುರಿತಾಗಿ ಕೆಲವೊಂದು ಬದಲಾವಣೆಗಳನ್ನು ತರಿಸುವ ದೃಷ್ಟಿಯಿಂದ ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಮಾನ್ಯ ಮುಖ್ಯಮಂತ್ರಿಗಳನ್ನು ಬೇಟಿಮಾಡಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ ದೊಡ್ಡರಂಗೇಗೌಡ್ರು ಹಿಂದಿನ ಸರ್ಕಾರ ಜಾರಿ‌ ಮಾಡಿದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾದ್ಯಮ ಶಿಕ್ಷಣ ವ್ಯವಸ್ಥೆಯನ್ನು ಹಿಂಪಡೆಯಬೇಕು. ಈ ಇಂಗ್ಲೀಷ್ ಮಾದ್ಯಮದಿಂದ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಹಾಗಾಗಿ ಕೂಡಲೇ ಹಿಂದಿನ ಸರ್ಕಾರದ ನಿರ್ಧಾರವನ್ನು ಹಿಂದಕ್ಕೆ ಪಡೆದು ಕನ್ನಡ ಉಳಿಸಬೇಕು. ನಾವು ಯಾರು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ ಆದರೆ ಒಂದು ಶಿಕ್ಷಣ ಮಾದ್ಯಮವಾಗಿ ಕಲಿಯಲು ನಮ್ಮ ವಿರೋಧವಿದೆ ಅಂತ ಹೇಳಿದರು.

ಹಿರಿಯ ಸಾಹಿತಿ ಹಾಗು ಚಿಂತಕರಾದ ಚಿದಾನಂದ ಮೂರ್ತಿ ಅವರು ಮಾತನಾಡಿ ಖಾಸಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಗಿಂತ ಸರ್ಕಾರಿ ಶಾಲೆಗಳಿಗೆ ಹೋಗುವವರ ವಿದ್ಯಾರ್ಥಿಗಳ ಸಂಖ್ಯೆ ತುಂಬ ಕಡಿಮೆ ಇದೆ ಹಾಗಾಗಿ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ವ್ಯವಸ್ಥೆ ಮಾಡುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು....

ಫೋಟೋ - http://v.duta.us/bYcP1QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/CAMQ-gAA

📲 Get Karnatakanews on Whatsapp 💬