ಉಪ ಸಮರಕ್ಕೆ ಕಮಲ ಸಿದ್ಧತೆ

  |   Karnatakanews

ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ನ 17 ಶಾಸಕರು ಅನರ್ಹತೆಗೊಂಡಿರುವ ಹಿನ್ನೆಲೆಯಲ್ಲಿ ಎದುರಾಗಲಿರುವ ಉಪಚುನಾವಣೆಗೆ ಸಜ್ಜಾಗಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಿರ್ಧರಿಸಿದೆ.

ಅನರ್ಹರ ಪೈಕಿ ಯಾರು ಪಕ್ಷ ಸೇರುತ್ತಾರೆ ಎಂಬುದಕ್ಕಿಂತ ಗೆಲುವು ಸಾಧಿಸುವ ಗುರಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಶುಕ್ರವಾರ ನಡೆದ ಮೊದಲ ಕೋರ್‌ ಕಮಿಟಿ ಸಭೆಯಲ್ಲಿ 17 ಕ್ಷೇತ್ರಗಳ ಉಪಚುನಾವಣೆ, ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆ ತಯಾರಿ, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಬಗ್ಗೆ ಸಭೆಯಲ್ಲಿ

ಸುದೀರ್ಘ‌ ಚರ್ಚೆ ನಡೆಯಿತು.

ಸಭೆ ಬಳಿಕ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರ ವಿಂದ ಲಿಂಬಾವಳಿ, ಕಾಂಗ್ರೆಸ್‌, ಜೆಡಿಎಸ್‌ನ ಒಟ್ಟು 17 ಶಾಸಕರು ರಾಜೀನಾಮೆ ನೀಡಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ತಯಾರಿ ನಡೆಸಲುಸ ಭೆಯಲ್ಲಿತೀರ್ಮಾ ನಿಸಲಾಯಿತು.

ಹಿಂದಿನ ವಿಧಾನಸಭಾಧ್ಯಕ್ಷರು ಅನರ್ಹತೆಗೊಳಿಸಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಅನರ್ಹತೆಗೊಂಡಿರುವ ಶಾಸಕರು ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ. ಈ ಕ್ಷೇತ್ರಗಳಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಉಪಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಬೇಕು. ಪಕ್ಷದ ಸದಸ್ಯರು, ಕಾರ್ಯ ಕರ್ತರು ಚುನಾವಣೆ ತಯಾರಿಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ....

ಫೋಟೋ - http://v.duta.us/Gvy0PgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/4TD9LgAA

📲 Get Karnatakanews on Whatsapp 💬