ಎತ್ತಿನಹೊಳೆ: ಮೇಲ್ಮನವಿ ಅರ್ಜಿ ವಜಾ

  |   Dakshina-Kannadanews

ಮಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುರಿತು ಎನ್‌ಜಿಟಿ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಪರಿಸರವಾದಿ ಕೆ.ಎನ್‌. ಸೋಮಶೇಖರ್‌ ಅವರು ಆ.16ರಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಎತ್ತಿನಹೊಳೆ ಯೋಜನೆ ಕುಡಿಯುವ ನೀರಿಗೆ ಸಂಬಂಧಿಸಿದೆ. ಆದುದರಿಂದ ಅದಕ್ಕೆ ಅಡ್ಡಿ ಮಾಡುವುದು ಸರಿಯಲ್ಲ ಎನ್ನುವ ವಾದವನ್ನು ಪುರಸ್ಕರಿಸಿ ನ್ಯಾಯಾಲಯ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಮರು ಪರಿಶೀಲನ ಅರ್ಜಿ ಸಲ್ಲಿಸಲು ದೂರುದಾರರು ನಿರ್ಧರಿಸಿದ್ದಾರೆ. ಯೋಜನೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡುವ ಬಗ್ಗೆ ನಿರ್ಧರಿಸಲಾಗುವುದು. ಪ್ರಮುಖ ಹೋರಾಟಗಾರರು ಮತ್ತು ವಕೀಲರ ಜತೆ ಚರ್ಚೆ ನಡೆಸಿ ಮುಂದಿನ ಕಾನೂನು ಹೋರಾಟ ನಡೆಯಲಿದೆ ಎಂದು ಕೆ.ಎನ್‌. ಸೋಮಶೇಖರ್‌ ತಿಳಿಸಿದ್ದಾರೆ.

ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಎನ್‌ಜಿಟಿ ಮುಂದೆ ಸೋಮಶೇಖರ್‌ ಮತ್ತು ಸಕಲೇಶಪುರದ ವಕೀಲ ಕಿಶೋರ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಅರ್ಜಿಯನ್ನು ತಿರಸ್ಕರಿಸುವುದಾಗಿ ನ್ಯಾಯಪೀಠ ಮೂರು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು. ಎನ್‌ಜಿಟಿ ನೀಡಿರುವ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಫೋಟೋ - http://v.duta.us/lZ-syQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/30SQ8AAA

📲 Get Dakshina Kannada News on Whatsapp 💬