ಕುಷ್ಠರೋಗ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

  |   Kolar-Karnatakanews

ಕೋಲಾರ: ಕುಷ್ಠರೋಗ ಮುಕ್ತ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಶ್ರೀನಿವಾಸಗೌಡ ಸೂಚಿಸಿದರು.

ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಕುಷ್ಠರೋಗವು ಪ್ರಾಚೀನ ಕಾಲದಿಂದ ಬಂದ ಕಾಯಿಲೆಯಾಗಿದೆ. ಸಾರ್ವಜನಿಕರು ಯಾವುದೇ ಸಂಕೋಚ, ಹಿಂಜರಿಕೆಯಿಲ್ಲದೆ ತಪಾಸಣೆ ಮಾಡಿಸಿಕೊಳ್ಳಬೇಕು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾದರೂ, ಕುಷ್ಠರೋಗ ನಿವಾರಣೆಯಾಗದಿರುವುದು ಬೇಸರದ ಸಂಗತಿ. ಪೌಷ್ಟಿಕ ಆಹಾರಗಳನ್ನು ಸೇವಿಸುವ ಮೂಲಕ ಪ್ರತಿಯೊಬ್ಬರೂ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ, ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಸೆ.23ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು 14 ದಿನ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ತಪಾಸಣೆ ಮಾಡಲಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದರು.

16 ಪ್ರಕರಣ ಪತ್ತೆ: ಜಿಲ್ಲೆಯಲ್ಲಿ ಈ ವರ್ಷ 16 ಪ್ರಕರಣಗಳು ಪತ್ತೆಯಾಗಿದ್ದು, ಸಾರ್ವಜನಿಕರು ಕುಷ್ಠರೋಗ ತಪಾಸಣೆ ಮಾಡಿಸಿಕೊಳ್ಳಲು ಮುಂದೆ ಬರದೇ ಇರುವುದರಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ತಿಳಿ-ಬಿಳಿ ತಾಮ್ರ ವರ್ಣದ ಮಚ್ಚೆಗಳು, ಸ್ಪರ್ಶ ಜ್ಞಾನ ಇಲ್ಲದಿರುವುದು, ನರಗಳ ಹೂತ, ಮಚ್ಚೆಗಳ ಮೇಲೆ ಕೂದಲು ಇಲ್ಲದಿರು ವುದು, ಮಾಂಸ ಖಂಡಗಳ ನಿಷ್ಕ್ರಿಯತೆ, ಮೂಗು ಚಪ್ಪಟೆಯಾಗುವುದು, ಕಣ್ಣು ಮುಚ್ಚಲು ಆಗದಿರು ವುದು, ಇನ್ನಿತರ ಕುಷ್ಠ ರೋಗಗಳ ಲಕ್ಷಣಗಳು ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು....

ಫೋಟೋ - http://v.duta.us/rwCsBAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/feKmBgAA

📲 Get Kolar Karnataka News on Whatsapp 💬