ಜೋಕುಮಾರ ಹುಟ್ಟಲಿ ಲೋಕವೆಲ್ಲ ಬೆಳಗಲಿ

  |   Bellarynews

•ಜಿ.ಚಂದ್ರಶೇಖರಗೌಡ

ಕಂಪ್ಲಿ: ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ, ಆ ತಾಯಿ ಹಾಲು ಕರೆಯಲಿ, ಕಟ್ಟಿದ ಮೊಸರು ಕಟಿಯಲಿ ನಮ್ಮ ದೇವಿ…ಎಂದು ಹೀಗೆ ಸಾಮೂಹಿಕವಾಗಿ ಮಹಿಳೆಯರು ಜೋಕುಮಾರನ ಕುರಿತು ಜನಪದ ಶೈಲಿಯಲ್ಲಿ ಸುಶ್ರಾವ್ಯವಾಗಿ ಹಾಡುವ ಹಾಡುಗಳನ್ನು ಕೇಳುವುದೇ ಚಂದ.

ಅಡ್ಡಡ್ಡ ಮಳಿ ಬಂದ, ದೊಡ್ಡ ದೊಡ್ಡ ಕೆರಿ ತುಂಬಿ, ಗೊಡ್ಡುಗಳೆಲ್ಲಾ ಹೈನಾಗಿ ಜೋಕುಮಾರ. ಮಡಿವಾಳರ ಕೇರಿ ಹೊಕ್ಯಾನೆ ಜೋಕುಮಾರ, ಮುಡಿ ತುಂಬಾ ಹೂ ಮುಡಿದಂತೆ ಚಲುವಿ ತನ್ನ ಮಡದಿಯಾಗೆಂದ ಸುಕುಮಾರ. ಈ ರೀತಿ ಜನಪದ ಶೈಲಿಯಲ್ಲಿ ವಿಶಿಷ್ಟವಾಗಿ ಹಾಡುಗಳನ್ನು ಹಾಡುವ ಬಾರಿಕೇರ ಸಮುದಾಯದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನನ್ನು ಬೇವಿನ ಎಲೆಗಳ ಮಧ್ಯೆ ಪ್ರತಿಷ್ಠಾಪಿಸಿಕೊಂಡು ಆತನ ಬಾಯಿಯಲ್ಲಿ ಬೆಣ್ಣೆಯನ್ನು ಇಟ್ಟು ಮನೆಗಳಿಗೆ ಹೊತ್ತೂಯ್ಯುವ ಜೋಗಪ್ಪನ ಹಬ್ಬದ ಆಚರಣೆ ಕಂಪ್ಲಿ ಹೋಬಳಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸದ್ಯ ಕಂಡು ಬರುತ್ತಿದೆ.

ಸಮೀಪದ ರಾಮಸಾಗರ ಗ್ರಾಮದ ಬಾರಕೇರ ಅಂದರೆ ಗಂಗಾಮತಸ್ಥರ ಮನೆಯಲ್ಲಿ ವಿಘ್ಞ ನಿವಾರಕ ಗಣೇಶ್‌ ವಿರ್ಸಜನೆಯ ನಂತರ ಜನಿಸಿರುವ ಜೋಕುಮಾರ ಸ್ವಾಮಿಯನ್ನು ಹನ್ನೊಂದು ದಿನ ಏಳು ಗ್ರಾಮಗಳಲ್ಲಿ ಗಂಗಾಮತ ಸಮುದಾಯದ ಬಾರಿಕೇರ ಹುಲಿಗೆಮ್ಮ, ಶಂಕ್ರಮ್ಮ, ಹಂಪಮ್ಮ, ಮಲ್ಲಮ್ಮ, ಸುಜಾತಮ್ಮ, ಅನಸೂಯಮ್ಮ, ರೇಣುಕಮ್ಮ ಮತ್ತು ದುರುಗಮ್ಮ ಅವರುಗಳು ಜೋಕುಮಾರಸ್ವಾಮಿಯನ್ನು ಮೆರೆಸುತ್ತಾರೆ....

ಫೋಟೋ - http://v.duta.us/hfEEhQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ip2qUgAA

📲 Get Bellary News on Whatsapp 💬