ಜಿಲ್ಲೆಯ ಕೈಗಾರಿಕೆಗಳಲ್ಲಿ ಉದ್ಯೋಗ ಕಡಿತವಾಗಿಲ್ಲ: ಡಿಸಿ ದೀಪಾ

  |   Dharwadnews

ಹುಬ್ಬಳ್ಳಿ: ಆರ್ಥಿಕ ಹಿಂಜರಿತದಿಂದ ಜಿಲ್ಲೆಯ ಯಾವುದೇ ಕೈಗಾರಿಕೆಗಳಲ್ಲಿ ಉದ್ಯೋಗ ಕಡಿತವಾಗಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ದೊಡ್ಡ ಪ್ರಮಾಣದ ಉದ್ಯಮಗಳ ಸಂಖ್ಯೆ ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿವೆ. ಆರ್ಥಿಕ ಹಿಂಜರಿತ ಈ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಎಸ್‌ಎಸ್‌ಐಡಿಸಿಯಿಂದ ಕೈಗಾರಿಕೆ ಉದ್ದೇಶಕ್ಕೆ ನೀಡುವ ನಿವೇಶನಗಳ ಹಂಚಿಕೆ ಪೂರ್ಣಗೊಂಡಿದೆ. ಕೆಐಡಿಬಿಯಿಂದ ವಿತರಿಸುವಲ್ಲಿ ಮಾರ್ಗಸೂಚಿಗಳ ಗೊಂದಲವಿದ್ದು, ಶೀಘ್ರದಲ್ಲಿ ಇದಕ್ಕೆ ಪರಿಹಾರ ದೊರೆಯಲಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ನಿಟ್ಟಿನಲ್ಲಿ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೈಗಾರಿಕೆ ಸಚಿವರು ಇಲ್ಲಿಯವರೇ ಆಗಿರುವುದರಿಂದ ಕೈಗಾರಿಕೆಗಳ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇಟಗಟ್ಟಿ ಹಾಗೂ ಗಾಮನಗಟ್ಟಿಯಲ್ಲಿ ಕೈಗಾರಿಕೆ ಉದ್ದೇಶಕ್ಕಾಗಿ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು, ಶೀಘ್ರದಲ್ಲಿ ಸಭೆ ಕರೆದು ದರ ನಿಗದಿ ಮಾಡಲಾಗುವುದು ಎಂದರು.

ನೆರೆಯಿಂದ ಜಿಲ್ಲೆಯಲ್ಲಿ ಸುಮಾರು 1036 ಕೋಟಿ ರೂ. ನಷ್ಟದ ಕುರಿತಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳ ಪ್ರಕಾರ 177 ಕೋಟಿ ರೂ. ಮಾತ್ರ ಜಿಲ್ಲೆಗೆ ದೊರೆಯಲಿದೆ. ಉಳಿದ ಹಣ ವಿವಿಧ ಇಲಾಖೆಗಳ ಮೂಲಕ ಮೂಲಸೌಲಭ್ಯ ಕಲ್ಪಿಸಲಾಗುವುದು. ಮನೆ, ವಸ್ತುಗಳನ್ನು ಕಳೆದುಕೊಂಡ 2478 ಕುಟುಂಬಗಳಿಗೆ 10,000 ರೂ. ಪರಿಹಾರ ನೀಡಲಾಗಿದೆ. ಶೇ.25 ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗಿದೆ. ಶೇ.75 ಹಾನಿಯಾದ ಮನೆಗಳಿಗೆ ಪರಿಹಾರ ನೀಡಬೇಕಾಗಿದೆ. ಜಿಲ್ಲೆಯಲ್ಲಿ 84 ಮನೆಗಳು ಸಂಪೂರ್ಣ ಬಿದ್ದಿದ್ದವು. ಇವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬಾಡಿಗೆ ಮನೆಗಾಗಿ ತಿಂಗಳಿಗೆ 5 ಸಾವಿರ ರೂ. ನೀಡಲಾಗಿದೆ ಎಂದು ತಿಳಿಸಿದರು....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/PdW-GQAA

📲 Get Dharwad News on Whatsapp 💬