ತನಿಖಾ ಸಂಸ್ಥೆ ದುರ್ಬಳಕೆ: ಕಾಂಗ್ರೆಸ್‌ ನಾಯಕರ ಆರೋಪ

  |   Chikkaballapuranews

ಚಿಕ್ಕಬಳ್ಳಾಪುರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಶೀಘ್ರ ಬಂಧನ ಮುಕ್ತರಾಗಬೇಕೆಂದು ಪ್ರಾರ್ಥಿಸಿ ಕಾಂಗ್ರೆಸ್‌ ನಾಯಕರು ಹಮ್ಮಿಕೊಂಡಿರುವ ಟೆಂಪಲ್‌ ರನ್‌ ಮುಂದುವರಿದಿದ್ದು, ದಿನಕ್ಕೊಂದು ದೇವಾಲಯ, ದರ್ಗಾಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಗುರುವಾರವಷ್ಟೇ ಹಾರೋಬಂಡೆಯ ಸಮೀಪ ಇರುವ ಶ್ರೀ ಶಿರಡಿ ಸಾಯಿಬಾಬಾರ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಎಂಜಿ ರಸ್ತೆಯಲ್ಲಿರುವ ಮಿಸ್ಕಿನ್‌ ಷಾ ಸೈಲಾನಿ ದರ್ಗಾದಲ್ಲಿ ಡಿ.ಕೆ.ಶಿವಕುಮಾರ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತ್ತು ಅಲ್ಪಸಂಖ್ಯಾತ ಮುಖಂಡರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌, ಡಿ.ಕೆ. ಶಿವಕುಮಾರ್‌ ಮೇಲೆ ಇ.ಡಿ. ವಿಚಾರಣೆ ಎಲ್ಲವೂ ಕೂಡ ರಾಜಕೀಯ ಪ್ರೇರಿತ. ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿದ್ದ ಅವರ ವರ್ಚಸ್ಸಿಗೆ ಧಕ್ಕೆ ತರಲು ದ್ವೇಷದ ಕ್ರಮಗಳು ಆಗಿವೆ ಎಂದು ಕಿಡಿಕಾರಿದರು.

ರಾಜಕೀಯ ಷಡ್ಯಂತ್ರ: ಡಿಕೆಶಿ ಅವರೇನು ದೇಶ ಬಿಟ್ಟು ಓಡಿ ಹೋಗಲು ತಯಾರಿ ನಡೆಸಿರಲಿಲ್ಲ. ಅವರೊಬ್ಬ ಮಹತ್ವಾಕಾಂಕ್ಷಿ ರಾಜಕಾರಣಿ. ಯಾವುದೇ ಸಂದರ್ಭದಲ್ಲಿಯೂ ಪಲಾಯನ ಮಾಡಿದ ಇತಿಹಾಸವೇ ಇಲ್ಲ. ಸಮಸ್ಯೆಯ ವಿರುದ್ಧ ಸಂಘರ್ಷ ಮಾಡುವುದು ಗೊತ್ತೇ ಹೊರತು ಸವಾಲುಗಳೊಂದಿಗೆ ರಾಜಿಯಾದವರಲ್ಲ. ದಿಢೀರನೇ ತನಿಖೆಗೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪವೊಡ್ಡಿ ಅವರ ಬಂಧನ ಮಾಡಿರುವುದು ರಾಜಕೀಯ ಷಡ್ಯಂತ್ರ ಎಂದರು....

ಫೋಟೋ - http://v.duta.us/i8TmpAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/GI9LUgAA

📲 Get Chikkaballapura News on Whatsapp 💬