ತ್ಯಾಜ್ಯ ಸಮಸ್ಯೆ ಪರಿಹಾರಕ್ಕೆ ಸ್ತ್ರೀಶಕ್ತಿ ಮೊರೆ

  |   Bangalore-Citynews

ಬೆಂಗಳೂರು: ರಾಜಧಾನಿಯಲ್ಲಿ ಸವಾಲಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹಾರಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಮೊರೆ ಹೋಗಿದೆ. ಈ ಸಂಬಂಧ ಮಹಿಳಾ ಸ್ವ ಸಹಾಯ ಗುಂಪುಗಳ ಜತೆ ಮಾತುಕತೆ ನಡೆಸಿದ್ದು, ಅ.1ರಿಂದ ಸ್ತ್ರೀ ಶಕ್ತಿ ಸಂಘಟನೆಗಳು ಒಣ ತ್ಯಾಜ್ಯ ಸಂಗ್ರಹಿಸಲಿವೆ. ಈ ಪ್ರಯತ್ನ ಯಶಸ್ವಿಯಾದರೆ ತ್ಯಾಜ್ಯ ವಿಲೇವಾರಿಗೆ ಸ್ತ್ರೀ ಶಕ್ತಿ ಸಂಘಟನೆ ಬಳಸಿಕೊಂಡ ಮೊದಲ ಪಾಲಿಕೆ ಎಂಬ ಹೆಗ್ಗಳಿಕೆಗೂ ಬಿಬಿಎಂಪಿ ಪಾತ್ರವಾಗಲಿದೆ.

ನಗರದಲ್ಲಿ ಒಣ ಹಾಗೂ ಹಸಿ ಕಸ ಪ್ರತ್ಯೇಕಿಸಲು ಹಾಗೂ ಸಂಗ್ರಹಿಸಲು ಈಗಾಗಲೇ ಏಳು ಸಾವಿರಕ್ಕೂ ಅಧಿಕ ಚಿಂದಿ ಆಯುವವರನ್ನು ಬಿಬಿಎಂಪಿ ಗುರುತಿಸಿದ್ದು, ಇವರಿಂದ 145 ವಾರ್ಡ್‌ಗಳಲ್ಲಿ ಮಾತ್ರ ಒಣ ಕಸ ಸಂಗ್ರಹಿಸಲಾಗುತ್ತಿದೆ. ಉಳಿದ 54 ವಾರ್ಡ್‌ಗಳಿಗೆ ಮಹಿಳಾ ಸ್ವ ಸಹಾಯ ಗುಂಪುಗಳ ನೆರವು ಪಡೆಯುವ ಉದ್ದೇಶವಿದೆ.

ಒಣ ಕಸ ಸಂಗ್ರಹಿಸಲು ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರ ಜತೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮ್ಯಾಪಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಕೆಲ ವಾರ್ಡ್‌ಗಳ ವಿಸ್ತೀರ್ಣ, ಜನಸಂಖ್ಯೆ ಹೆಚ್ಚಿದ್ದು, ಶೀಘ್ರವೇ ಯಾವ ರಸ್ತೆಗೆ ಯಾರು ಒಣ ಕಸ ಸಂಗ್ರಹಿಸಬೇಕೆಂದು ತಿಳಿಸಲಾಗುವುದು ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ರಂದೀಪ್‌ ತಿಳಿಸಿದ್ದಾರೆ....

ಫೋಟೋ - http://v.duta.us/OgqtbAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/pD0vVQAA

📲 Get Bangalore City News on Whatsapp 💬