ನದಿ ಪಾತ್ರದಲ್ಲಿ ಹೆಚ್ಚು ಗಿಡ ಬೆಳೆಸಿ

  |   Mysorenews

ಮೈಸೂರು: ಕಾವೇರಿ ನದಿಪಾತ್ರದಲ್ಲಿ ಪರಿಸರ ಉಳಿಸಿ ಬೆಳೆಸುವ ಕಾರ್ಯ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಸದ್ಗುರು ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಚಾರ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಇಶಾ ಫೌಂಡೇಷನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಕೈಗೊಂಡಿರುವ ರ್ಯಾಲಿಗೆ ಶುಕ್ರವಾರ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ವರ್ಷದಲ್ಲಿ ಅರಣ್ಯ ಪ್ರದೇಶ ದೊಡ್ಡ ಮಟ್ಟದಲ್ಲಿ ನಾಶವಾಗುತ್ತಿದೆ. ಅರಣ್ಯ ನಾಶ ತಡೆಗಟ್ಟಲು ಪ್ರತಿಯೊಬ್ಬರು ಶ್ರಮಿಸುವ ಅವಶ್ಯಕತೆ ಇದೆ. ನಮ್ಮಲ್ಲಿ ಅರಣ್ಯ ಪ್ರದೇಶ ಉತ್ತಮವಾಗಿದ್ದರೆ ಮಳೆ, ಬೆಳೆ ಕೂಡ ಉತ್ತಮವಾಗಿ ಆಗುತ್ತದೆ. ಈ ನಿಟ್ಟಿನಲ್ಲಿ ಮರಗಿಡಗಳನ್ನು ಬೆಳೆಸಲು ಹೊರಟಿರುವ ಸದ್ಗುರು ಅವರಿಗೆ ಪ್ರತಿಯೊಬ್ಬರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ರ್ಯಾಲಿಗೆ ಚಾಲನೆ ದೊರೆಯುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸದ್ಗುರು, ಕಾವೇರಿ ನದಿ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಸಾಕಷ್ಟು ಜಾಗೃತಿ ಇದೆ. ಆದರೆ, ಅದು ಕಾರ್ಯರೂಪಕ್ಕೆ ಬರಬೇಕು. ಈ ಕಾರ್ಯವನ್ನು ಒಬ್ಬರಿಂದ ಮಾಡಲು ಸಾಧ್ಯವಿಲ್ಲ. ಎಲ್ಲರೂ ಕೈಜೋಡಿಸಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರು....

ಫೋಟೋ - http://v.duta.us/EePicgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/FoBRZgAA

📲 Get Mysore News on Whatsapp 💬