ಪಾರ್ಕಿಂಗ್‌ ಜಾಗ ಕೇಳ್ಬೇಡಿ; ದಂಡ ಮರೀಬೇಡಿ!

  |   Bangalore-Citynews

ಬೆಂಗಳೂರು: ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಅನ್ವಯ ಸಂಚಾರ ಪೊಲೀಸರು, ನಿಷೇಧಿತ ಪ್ರದೇಶದಲ್ಲಿ ನಿಲುಗಡೆಯಾಗುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಭಾರೀ ದಂಡ ಪ್ರಯೋಗದಲ್ಲಿ ಸಕ್ರಿಯರಾಗಿದ್ದಾರೆ. ಆದರೆ, ಸ್ಥಳೀಯ ಆಡಳಿತ ಸಂಸ್ಥೆಗಳು ನಗರದಲ್ಲಿ ವಾಹನ ನಿಲುಗಡೆಗೆ ಸೌಲಭ್ಯಗಳನ್ನೇ ಕಲ್ಪಿಸಿಲ್ಲ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಮತ್ತು ನಗರ ತಜ್ಞರಿಂದ ಈ ಧೋರಣೆ ಬಗ್ಗೆ ಅಪಸ್ವರ ಕೇಳಿಬರುತ್ತಿದೆ.

ಸಂಚಾರ ಪೊಲೀಸರ ಮಾಹಿತಿ ಪ್ರಕಾರ ನಗರದಲ್ಲಿ ಸಂಚರಿಸುವ ಲಕ್ಷಾಂತರ ವಾಹನ ನಿಲುಗಡೆಗೆ ಸರಿಸುಮಾರು ನೂರು ಎಕರೆ ಜಾಗದ ಅಗತ್ಯವಿದೆ. ಆದರೆ, ಬಹುತೇಕ ಪ್ರದೇಶ ಹಾಗೂ ಹೃದಯ ಭಾಗದಲ್ಲೇ ಜಾಗದ ಕೊರತೆ ಇದೆ. ಹೀಗಾಗಿ ವಾಹನ ಸವಾರರು ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ತಮ್ಮದಲ್ಲದ ತಪ್ಪಿಗೆ ಸಾವಿರಾರು ರೂಪಾಯಿ ದಂಡ ಪಾವತಿಸುವಂತಾಗಿದೆ.

ನಗರದಲ್ಲಿ ಸುಮಾರು 80 ಲಕ್ಷಕ್ಕೂ ಹೆಚ್ಚು ವಾಹನಗಳಿದ್ದು, ಇದರೊಂದಿಗೆ ನಿತ್ಯ ಸರಾಸರಿ 1,700 ಹೊಸ ವಾಹನಗಳ ನೋಂದಣಿ ಆಗುತ್ತಿದೆ. ಆದರೆ, ಈ ಎಲ್ಲ ವಾಹನಗಳಿಗೆ ನಿಲುಗಡೆಗೆ ಸೂಕ್ತ ಸೌಲಭ್ಯಗಳು ನಗರದಲ್ಲಿ ಇಲ್ಲ. ವಾಹನ ಮಾಲಿಕರು ಮನೆ ಮುಂದೆ ಹಾಗೂ ಕಚೇರಿ ಮುಂದೆ ನಿಲ್ಲಿಸುತ್ತಿದ್ದಾರೆ. ಇದು ಇತರೆ ವಾಹನಗಳ ಸಂಚಾರಕ್ಕೆ ತೀವ್ರ ಕಿರಿಕಿರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕಾದ ಬಿಬಿಎಂಪಿ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಕೈಚೆಲ್ಲಿ ಕುಳಿತಿವೆ. ಮತ್ತೂಂದೆಡೆ ಸಾವಿರಾರು ಶಿಕ್ಷಣ ಸಂಸ್ಥೆಗಳು ಸಹ ತಮ್ಮ ವಾಹನಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ, ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ ಎಂದು ಸಾರಿಗೆ ತಜ್ಞರು ಆರೋಪಿಸುತ್ತಾರೆ....

ಫೋಟೋ - http://v.duta.us/W4KJZQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/SrPDAAAA

📲 Get Bangalore City News on Whatsapp 💬