ಪ್ರವಾಹ ಸಂತ್ರಸ್ತರಿಗೆ ಈಶ್ವರಪ್ಪ ಭರವಸೆ

  |   Belgaumnews

ಬೆಳಗಾವಿ : ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಶನಿವಾರ ಭೇಟಿ ನೀಡಿದ ಅವರು, ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ದಾಖಲಾತಿಗಳನ್ನು ಕೇಳದೇ ಪ್ರವಾಹ ಬಾಧಿತ ಎಲ್ಲ ಕುಟುಂಬಗಳಿಗೂ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ ಎಂದರು.

ಮನೆಗಳು ಕುಸಿದಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆಯ ವರದಿ ಆಧರಿಸಿ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಹದಿನೈದು ದಿನಗಳಲ್ಲಿ ಸಂಪೂರ್ಣ ವರದಿ ನೀಡಲು ಜಿಲ್ಲಾ ಪಂಚಾಯತ ಸಿಇಓ ಗಳಿಗೆ ಸೂಚನೆ ನೀಡಲಾಗಿದೆ. ಮಾಹಿತಿಯನ್ನು ಪಡೆದುಕೊಂಡ ಬಳಿಕ ಸಮರ್ಪಕ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು....

ಫೋಟೋ - http://v.duta.us/02Kr5wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/drDXHAAA

📲 Get Belgaum News on Whatsapp 💬