ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ ಕಾರ್ಯಾರಂಭ

  |   Ramnagaranews

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವಿನ ವಾಹನ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ (275)ನ್ನು 10 ಮಾರ್ಗಗಳಿಗೆ ವಿಸ್ತರಿಸುವ ಯೋಜನೆ ಯನ್ನು ಹಮ್ಮಿಕೊಂಡಿದೆ. ಬೆಂಗಳೂರಿನಿಂದ ಮದ್ದೂರಿನ ನಿಡಘಟ್ಟ ಗ್ರಾಮದವರೆಗೆ ಶೇ.10ರಷ್ಟು ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಟ್ಟಣೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರು ಮತ್ತು ಮೈಸೂರು ನಡುವಿನ ರಸ್ತೆಯನ್ನು ನಾಲ್ಕು ಪಥಗಳ ಹೆದ್ದಾರಿ ರಸ್ತೆಯನ್ನಾಗಿ ಪರಿವರ್ತಿಸಲಾಗಿತ್ತು. ಮಂಗಳೂರಿನ ಬಂಟ್ವಾಳದವರೆಗೂ, ರಸ್ತೆ ಅಭಿವೃದ್ಧಿಯಾಗಿ ವಾಹನ ದಟ್ಟಣೆ ಕೂಡ ಗಣನೀಯವಾಗಿ ಏರಿಕೆಯಾಯಿತು. 2014ರಲ್ಲಿ ಕೇಂದ್ರ ಸರ್ಕಾರ ಈ ರಸ್ತೆಯನ್ನು 8 ಪಥದ ರಸ್ತೆ ನಿರ್ಮಿಸಲು ಮುಂದಾಗಿ ನಂತರದ ದಿನಗಳಲ್ಲಿ 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಯಿತು. ಇದೀಗ ಬೆಂಗಳೂರು ನಗರದಿಂದ 18 ಕಿಮೀ ದೂರ ಇರುವ ನೈಸ್‌ ಜಂಕ್ಷನ್‌ ಬಳಿಯಿಂದ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ.

ಎಲ್ಲಿಂದ ಎಲ್ಲಿಯವರೆಗೆ ವಿಸ್ತರಣೆ: ಬೆಂಗಳೂರಿನ ಕೆಂಗೇರಿ ಹೊರ ವಲಯದ ನೈಸ್‌ ಜಂಕ್ಷನ್‌ ಬಳಿಯ ಪಂಚಮುಖೀ ದೇವಾಲಯದಿಂದ ಬೆಂಗಳೂರು ದಕ್ಷಿಣ ತಾಲೂಕು ಕುಂಬಳಗೂಡು, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದ ಮೂಲಕ ಮೈಸೂರು ಹೊರ ವಲಯದ ಕೊಲಂಬಿಯಾ ಏಷಿಯಾ ಆಸ್ಪತ್ರೆಯವರೆಗೆ 117.30 ಕಿ.ಮೀ ರಸ್ತೆಯನ್ನು 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ....

ಫೋಟೋ - http://v.duta.us/GVpzfwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/O1WAFQAA

📲 Get Ramnagara News on Whatsapp 💬