ಮತ್ತೆ ಮಳೆ, ಆತಂಕ ಸೃಷ್ಟಿ!

  |   Haverinews

ಹಾವೇರಿ: ಜಿಲ್ಲೆ ಹಾಗೂ ಪಕ್ಕದ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದ್ದರಿಂದ ಜಿಲ್ಲೆಯ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.

ಕಳೆದ ಒಂದು ತಿಂಗಳ ಹಿಂದಷ್ಟೇ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಹರಿದಿರುವ ವರದಾ, ಕುಮದ್ವತಿ, ಧರ್ಮಾ, ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೆರೆ ಸೃಷ್ಟಿಯಾಗಿತ್ತು. ಈಗ ಮತ್ತೆ ಈ ಮಲೆನಾಡು ಜಿಲ್ಲೆಯಲ್ಲಿ ಮಳೆ ಆರ್ಭಟ ಶುರುವಾಗಿದ್ದು ಜಿಲ್ಲೆಯ ನದಿಪಾತ್ರದ ಜನರಲ್ಲಿ ಭಯ ಹುಟ್ಟಿಸಿದೆ.

ಪ್ರವಾಹದ ರೌದ್ರ ನರ್ತನದಿಂದ ಜಿಲ್ಲೆಯ ಅನೇಕ ಗ್ರಾಮಗಳಲ್ಲಿನ ಮನೆಗಳು, ರಸ್ತೆ, ಶಾಲೆ, ದೇವಸ್ಥಾನ ಕುಸಿದು ಬಿದ್ದಿದ್ದವು. ಸಾವಿರಾರು ಮನೆಗಳು ಕುಸಿದು ಜನರು ಸಂಕಷ್ಟಕ್ಕೊಳಗಾಗಿದ್ದರು. ಬಳಿಕ ಎರಡು ವಾರ ಮಳೆ ಇಳಿಮುಖವಾಗಿ, ನದಿಗಳಲ್ಲಿ ಜಲರೌದ್ರತೆ ಕಡಿಮೆಯಾಗುತ್ತಿದ್ದಂತೆ ಜನರು ನೆಮ್ಮದಿಯ ನಿಟ್ಟುಬಿಟ್ಟಿದ್ದರು. ಮರು ಬದುಕು ಕಟ್ಟಿಕೊಳ್ಳುವ ಚಟುವಟಿಕೆಯತ್ತ ತೊಡಗಿದ್ದರು. ಮನೆ ಸ್ವಚ್ಛಗೊಳಿಸುವಿಕೆ, ಮನೆ ದುರಸ್ತಿ ಮಾಡಿಕೊಳ್ಳುವಿಕೆ, ನೀರಿಗೆ ನೆಂದ ಸರಕು ಸರಂಜಾಮು, ಆಹಾರ ಪದಾರ್ಥ ಒಣಗಿಸಿಕೊಳ್ಳುವ ಮುನ್ನವೇ ಮತ್ತೆ ಮಳೆ ಆರಂಭವಾಗಿದ್ದು ಜನರು ಕಂಗಾಲಾಗಿದ್ದಾರೆ....

ಫೋಟೋ - http://v.duta.us/8fs8LwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/OHYmwAAA

📲 Get Haveri News on Whatsapp 💬