ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿಯಲ್ಲಿ

  |   Shimoganews

ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಇದು ಉತ್ತಮ ಅವಕಾಶವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಚುನಾವಣಾ ಶಾಖೆ ಸಿಬ್ಬಂದಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ವಿದ್ಯಮಾನವಾಗಿದೆ. ಎಲ್ಲರ ಸಹಭಾಗಿತ್ವದಿಂದ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಪ್ರಮುಖ ಕಾರ್ಯವಾಗಿದೆ. ಎಲ್ಲಾ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಮಾತ್ರವಲ್ಲದೆ, ಮತದಾರರ ಪಟ್ಟಿಯಲ್ಲಿರಬಹುದಾದ ದೋಷಗಳನ್ನು ಸರಿಪಡಿಸುವುದು, ಮತದಾರರ ವೈಯಕ್ತಿಕ ಮಾಹಿತಿಯನ್ನು ಪಡೆದುಕೊಂಡು ಅವರೊಂದಿಗೆ ಸಂಪರ್ಕ ಸಾಧಿಸುವುದು ಸಹ ಈ ವಿಶೇಷ ಅಭಿಯಾನದ ಉದ್ದೇಶವಾಗಿದೆ ಎಂದರು.

ಎಲ್ಲಾ ಬಿಎಲ್ಒಗಳು ಸೆಪ್ಟೆಂಬರ್‌ ಅಂತ್ಯದ ಒಳಗಾಗಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಬೇಕು. ಇದಕ್ಕಾಗಿ ಮೊಬೈಲ್ ಆ್ಯಪ್‌ ಸಿದ್ಧಪಡಿಸಲಾಗಿದ್ದು, ಈ ಕುರಿತು ತರಬೇತಿ ನೀಡಲಾಗಿದೆ. ಜಿಪಿಎಸ್‌ ಆಧಾರಿತ ಮೊಬೈಲ್ ಆ್ಯಪ್‌ ಬಳಕೆಯಿಂದ ನಿಖರ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಿದೆ. ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಬಿಎಲ್ಒಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು....

ಫೋಟೋ - http://v.duta.us/9uXQ6wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/1og5SgAA

📲 Get Shimoga News on Whatsapp 💬