ಮೈತ್ರಿ ಸರ್ಕಾರದಲ್ಲಿ ಆಗಿದ್ದ ನಾಮನಿರ್ದೇಶನಕ್ಕೆ ಕೊಕ್‌

  |   Chikkaballapuranews

ಚಿಕ್ಕಬಳ್ಳಾಪುರ: ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶಿತಗೊಂಡಿದ್ದ ವ್ಯಕ್ತಿಗಳಿಗೆ ಬಿಜೆಪಿ ಸರ್ಕಾರ ಕೊಕ್‌ ಕೊಡುತ್ತಿದ್ದು, ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಾಗಿರುವ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರನ್ನು ರಾಜ್ಯ ವಕ್ಫ್ ಮಂಡಳಿ ದಿಢೀರನೇ ಬದಲಾಯಿಸಿದ್ದು, ಹೊಸ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರಾಗಿ ರಫೀವುಲ್ಲಾ ನೇಮಗೊಂಡಿದ್ದರು. ಮೈತ್ರಿ ಸರ್ಕಾರದಲ್ಲೂ ಅವರೇ ಜಿಲ್ಲಾ ವಕ್ಫ್ ಮಂಡಳಿ ಜಿಲ್ಲಾ ಅಧ್ಯಕ್ಷರಾಗಿ ಮುಂದುವರಿದಿದ್ದರು. ಆದರೆ ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿ.ಎಸ್‌.ಯೂಡಿಯರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಬಿ.ಎಸ್‌.ರಫೀವುಲ್ಲಾಗೆ ಕೊಕ್‌: ಹಲವು ವರ್ಷಗಳಿಂದ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್‌.ರಫೀವುಲ್ಲಾ, ಸದ್ಯ ಕಾಂಗ್ರೆಸ್‌ ಪಕ್ಷದಲ್ಲಿಯೇ ಗುರುತಿಸಿಕೊಂಡಿದ್ದು, ಶಾಸಕ ಸ್ಥಾನಕ್ಕೆ ಡಾ.ಕೆ.ಸುಧಾಕರ್‌ ರಾಜೀನಾಮೆ ನೀಡಿದ ಬಳಿಕ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡ ಬಳಿಕ ಡಾ.ಕೆ.ಸುಧಾಕರ್‌ ಜೊತೆ ಗುರುತಿಸಿಕೊಂಡಿರಲಿಲ್ಲ. ಹೀಗಾಗಿ ಡಾ.ಕೆ.ಸುಧಾಕರ್‌, ಬಿ.ಎಸ್‌.ರಫೀವುಲ್ಲಾರನ್ನು ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೊಕ್‌ ಕೊಡಿಸುವಲ್ಲಿ ಯಶಸ್ವಿಯಾಗಿರುವುದು ಸದ್ಯ ಕ್ಷೇತ್ರದ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ....

ಫೋಟೋ - http://v.duta.us/KPo3gQEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/RxZkrgAA

📲 Get Chikkaballapura News on Whatsapp 💬