ರೈತರಿಗೆ ಸೂಕ್ತ ಪರಿಹಾರ ನೀಡಿ: ಶೋಭಾ

  |   Chikkamagalurunews

ತರೀಕೆರೆ: ತಾಲೂಕಿನಲ್ಲಿ ಹಾದು ಹೋಗಲಿರುವ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್‌ ರಸ್ತೆಗೆ ಭೂಮಿ ಕಳೆದುಕೊಳ್ಳಲಿರುವ ರೈತರು ತಮ್ಮ ಭೂಮಿಗೆ ಸೂಕ್ತ ಪರಿಹಾರ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಪರಿಹಾರ ನೀಡಬೇಕು. ವಿಶ್ವಾಸದಿಂದ ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ವಿಶೇಷ ಭೂ ಸ್ವಾಧೀನಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಮತ್ತು ಸಂತ್ರಸ್ತ ರೈತರ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರ ಹಿತ ಕಾಪಾಡುವುದೇ ನಮ್ಮ ಗುರಿ ಎಂದರು.

ನಗರ ವ್ಯಾಪ್ತಿಯಲ್ಲಿ ಒಂದು ರೀತಿಯ ಪರಿಹಾರ ನೀಡಲಾಗುತ್ತಿದೆ. 5 ಗುಂಟೆ ಜಮೀನು ಕಳೆದುಕೊಂಡವರಿಗೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಕಳೆದ 3 ವರ್ಷಗಳಿಂದ ರೈತರು ಭೂಮಿಯಲ್ಲಿ ಬೆಳೆ ಬೆಳೆಯುತ್ತಿಲ್ಲ. ಜಮೀನುಗಳು ಮಾರಾಟವಾಗುತ್ತಿಲ್ಲ. ಬ್ಯಾಂಕ್‌ಗಳು ಎನ್‌ಒಸಿ ನೀಡುತ್ತಿಲ್ಲ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಖಾಸಗಿ ವ್ಯಕ್ತಿಗಳ ಹಿತಾಸಕ್ತಿ ಕಾಪಾಡಲು ಅಧಿಕಾರಿಗಳು ಹೆದ್ದಾರಿ ಅಲೈನ್‌ಮೆಂಟ್ ಬದಲಾವಣೆ ಮಾಡಲಾಗಿದೆ ಎಂದು ದೂರಿದ್ದಾರೆ ಮತ್ತು ಈಗಿನ ಮಾರುಕಟ್ಟೆ ದರ ಮತ್ತು 1:6 ಅನುಪಾತದಲ್ಲಿ ಪರಿಹಾರ ನೀಡುವಂತೆ ಕೇಳುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು....

ಫೋಟೋ - http://v.duta.us/_zFX5QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/OttCSAAA

📲 Get Chikkamagaluru News on Whatsapp 💬