ಸ್ವಚ್ಛ ಬೆಂಗಳೂರು ಸರ್ಕಾರದ ಆದ್ಯತೆ: ಸಿಎಂ

  |   Bangalore-Citynews

ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಕುರಿತಂತೆ ನಗರದ ಬಿಜೆಪಿ ಸಂಸದರು ಹಾಗೂ ಶಾಸಕರ ಜತೆ ಸಭೆ ನಡೆಸಿದ ಅವರು, ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆಯಾಗಿದ್ದು, ಕಸ ವಿಲೇವಾರಿಗೆ ಅಗತ್ಯವಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಬೆಂಗಳೂರಿನ ರಸ್ತೆ, ಉದ್ಯಾನವನಗಳು ಸ್ವಚ್ಛವಾಗಿಡಲು 24 ಗಂಟೆಗಳ ಕಾಲ ಕೆಲಸ ಮಾಡಲು ಪೌರಕಾರ್ಮಿಕರನ್ನು ನೇಮಿಸುವ ಅಗತ್ಯವಿದೆ. ರಸ್ತೆಗಳಲ್ಲಿರುವ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸ್ಥಳೀಯ ಸಮಿತಿ ರಚಿಸಿ, ಮಾಸಿಕ ಸಭೆ ಮಾಡಬೇಕು.

ಈ ಸಭೆಯಲ್ಲಿ ಆಯಾ ಪ್ರದೇಶದ ಅಭಿವೃದ್ಧಿ ಕುರಿತು ಚರ್ಚಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಂಟು ವಲಯಗಳಿಗೆ ನಾಲ್ಕು ವಿಶೇಷ ಆಯುಕ್ತರನ್ನು ಹೆಚ್ಚಿನ ಅಧಿಕಾರ ನೀಡಿ ನೇಮಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರಗಳನ್ನು ಒದಗಿಸಲು ಬೆಂಗಳೂರು ಸಹಾಯವಾಣಿ ಸ್ಥಾಪನೆ ಹಾಗೂ ಕಸ ವಿಲೇವಾರಿಗೆ ಪರಿಹಾರ ಕಲ್ಪಿಸಲು ಬೆಂಗಳೂರಿನಲ್ಲಿ ಘನತ್ಯಾಜ್ಯ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲು ಸೂಚಿಸಿದರು....

ಫೋಟೋ - http://v.duta.us/kM4ngQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/5JEYzQAA

📲 Get Bangalore City News on Whatsapp 💬